ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇರುವ ಶಾಂತಿನಗರದ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 10 ಎಕರೆಗೂ ಅಧಿಕಾರಿ ಅರಣ್ಯ ಪ್ರದೇಶ ಇದೀಗ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ವೇಗವಾಗಿ ಹರಡಿದ್ದರಿಂದ ಸುಮಾರು 10 ಎಕರೆಗೂ ಅಧಿಕ ಅರಣ್ಯ ಪ್ರದೇಶವು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಬೆಂಕಿಯ ಕೆನ್ನಾಲಿಗೆಗೆ ಅರಣ್ಯದಲ್ಲಿದ್ದ ಅಪಾರ ಪ್ರಮಾಣದ ಗಿಡಮೂಲಿಕೆಗಳು ಮತ್ತು ಸಸ್ಯಸಂಕುಲ ನಾಶವಾಗಿದ್ದು, ವನ್ಯಜೀವಿಗಳಿಗೂ ಸಂಕಷ್ಟ ಎದುರಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.








