ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೃಷಿಹೊಂಡದಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಇಬ್ಬರು ಕಾರ್ಮಿಕರ ಸಾವನ್ನಪ್ಪಿರುವ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಮೃತರನ್ನು ರಮೇಶ್ (27) ಹಾಗೂ ಮಹೇಶ್ (34) ಎಂದು ತಿಳಿದುಬಂದಿದೆ ಕೃಷಿ ಹೊಂಡದ ಸಮೀಪ ಚಪ್ಪಲಿ ಪತ್ತೆಯಾದ ಹಿನ್ನೆಲೆಯಲ್ಲಿ, ಅಗ್ನಿ ಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಕೃಷಿ ಹೊಂಡದಲ್ಲಿ ಈಜಲು ಹೋಗಿ ರಮೇಶ್ ಮಹೇಶ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಲ್ ಎಂದು ಶಂಕಿಸಲಾಗಿದೆ.
ಬನ್ನೂರಿನ ಕಾಫಿ ತೋಟದಲ್ಲಿ ರಮೇಶ್ ಮತ್ತು ಕೆಲಸ ಮಾಡುತ್ತಿದ್ದರು. ಕೊಪ್ಪ ತಾಲೂಕಿನ ಜಯಪುರ ಮೂಲದ ರಮೇಶ ಮತ್ತು ಮಹೇಶ್ ಎಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.








