Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಇಬ್ಬರು ಪ್ರಜೆಗಳ ವಶ: ಬ್ಯಾಗ್‌ನಲ್ಲಿ ಪತ್ತೆಯಾಯ್ತು ಸ್ಯಾಟಲೈಟ್ ಫೋನ್!

19/04/2026 5:26 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 17 ಕಾರ್ಮಿಕರ ದುರ್ಮರಣ

19/04/2026 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
KARNATAKA

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

By kannadanewsnow0919/04/2026 5:24 PM

ನವದೆಹಲಿ: ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮೊದಲು ಸಂವಿಧಾನ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ನೀಡಿದ್ದ ಆ ಪಕ್ಷವು ನಂತರ ಯುಟರ್ನ್‌ ಹೊಡೆಯಿತು. ಇದರಿಂದ ದಕ್ಷಿಣ ರಾಜ್ಯಗಳಿಗೆ ಸಿಕ್ಕಿದ್ದ ಬಂಗಾರದಂಥ ಅವಕಾಶ ತಪ್ಪಿಹೋಯಿತು ಎಂದು ಅವರು ಕಿಡಿಕಾರಿದರು.

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳು ಜನರಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಭೀತಿ ಸೃಷ್ಟಿಸುತ್ತಿವೆ ಎಂದರು.

ಕೆಲ ದಿನಗಳ ಹಿಂದೆ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಡಿಎಂಕೆ ನಾಯಕರಿಗೆ ಮಹಿಳಾ ಮೀಸಲು ಹಾಗೂ ಕ್ಷೇತ್ರ ಮರು ವಿಂಗಡಣೆ ಮಸೂದೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷವೂ ವಿರೋಧ ಮಾಡಿರಲಿಲ್ಲ. ಅದಾದ ಮೇಲೆ ಎರಡು-ಮೂರು ದಿನಗಳಲ್ಲಿ ಮಾಧ್ಯಮ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು, “ಈ ಮಸೂದೆಗಳನ್ನು ಪಾಸ್‌ ಮಾಡಲು ಜೂನ್‌ ತಿಂಗಳಲ್ಲಿ ಸಂಸತ್‌ ಅಧಿವೇಶನ ಕರೆಯಿರಿ” ಎಂದು ಕೇಂದ್ರಕ್ಕೆ ಸಲಹೆ ಮಾಡಿದ್ದರು. ಅಂದರೆ, ಅವರಿಗೆ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ಇತ್ತು ಎಂದಾಯಿತಲ್ಲವೇ? ಈ ಕೂಡಲೇ ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿದರೆ ಚುನಾವಣೆಯಲ್ಲಿ ತನಗೆ ಧಕ್ಕೆ ಆಗಬಹುದೆಂಬ ಕಾರಣಕ್ಕೆ ಆ ಪಕ್ಷವು ಮಸೂದೆಗಳಿಗೆ ಬೆಂಬಲ ನೀಡಲಿಲ್ಲ ಎಂದು ಕುಮಾರಸ್ವಾಮಿ ಅವರು ದೂರಿದರು.

ದಕ್ಷಿಣದ ರಾಜ್ಯಗಳಿಗೆ ಈ ತಿದ್ದುಪಡಿ ಮಸೂದೆಗಳಿಂದ ಅನ್ಯಾಯವಾಗುತ್ತಿದೆ ಎಂದು ಡಿಎಂಕೆ ಹೇಳುತ್ತಿರುವುದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ. ಹಾಗೆ ನೋಡಿದರೆ ಡಿಎಂಕೆಯಿಂದಲೇ ದಕ್ಷಿಣಕ್ಕೆ ಅನ್ಯಾಯವಾಗುತ್ತಿದೆ. ಒಂದು ವೇಳೆ ಅನ್ಯಾಯ ಆಗುವುದೇ ಆಗಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಕ್ಷೇಪ ಎತ್ತಲಿಲ್ಲವೇಕೆ? ನಾಯ್ಡು ಅವರಂತೂ ಮಸೂದೆಗಳಿಗೆ ಮುಕ್ತ ಬೆಂಬಲ ನೀಡಿದರು ಎಂದು ಕುಮಾರಸ್ವಾಮಿ ಮಾಧ್ಯಮಗಳ ಗಮನಕ್ಕೆ ತಂದರು.

ಜನಸಂಖ್ಯೆ ನಿಯಂತ್ರಣದಲ್ಲಿ ಉತ್ತಮ ಸಾಧನೆ ಮಾಡಿ, ರಾಷ್ಟ್ರೀಯ ನೀತಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದಿರುವ ಈ ಐದು ರಾಜ್ಯಗಳಿಗೆ ಅನ್ಯಾಯ ಆಗಬಾರದೆಂಬ ಏಕೈಕ ಉದ್ದೇಶದಿಂದ ಕೇಂದ್ರವು ಎಲ್ಲರಿಗೂ ಸಮಾನ ನ್ಯಾಯ ನೀಡುವ ಸಲುವಾಗಿ ಪ್ರತೀರಾಜ್ಯದ ಲೋಕಸಭೆ ಕ್ಷೇತ್ರಗಳ ಸಂಖ್ಯೆಯನ್ನು ಸರಾಸರಿ ೫೦%ರಷ್ಟು ಹೆಚ್ಚಿಸುವುದಾಗಿ ಹೇಳಿತು. ಲೋಕಸಭೆಯಲ್ಲಿ ಈ ಬಗ್ಗೆ ಅಮಿತ್‌ ಶಾ ಅವರು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಅಂಕಿ-ಅಂಶಗಳ ಸಮೇತ ಮನಮುಟ್ಟುವಂತೆ ಹೇಳಿದರು. ಹಾಗಿದ್ದರೂ ಕಾಂಗ್ರೆಸ್‌ ಪಕ್ಷವು ತನ್ನ ಪ್ರತಿಷ್ಠೆಗಾಗಿ ತಾನೂ ದಾರಿ ತಪ್ಪಿದ್ದಲ್ಲದೆ, ತನ್ನ ಮಿತ್ರಪಕ್ಷಗಳನ್ನು ಕೂಡ ದಿಕ್ಕುತಪ್ಪಿಸಿತು. ಈಗ ದಕ್ಷಿಣದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾರು ಸರಿಪಡಿಸುತ್ತಾರೆ? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಾನು ದಕ್ಷಿಣದ ಜನಪ್ರತಿನಿಧಿಯಾಗಿ ಹೇಳುತ್ತಿದ್ದೇನೆ; 5 ರಾಜ್ಯಗಳಿಗೆ ಅನ್ಯಾಯ ಆಗುತ್ತಿರಲಿಲ್ಲ

ಸ್ವತಃ ನಾನು ದಕ್ಷಿಣ ರಾಜ್ಯಗಳಿಂದ ಬಂದ ಜನಪ್ರತಿನಿಧಿಯಾಗಿ ಹೇಳುತ್ತಿದ್ದೇನೆ. ದಕ್ಷಿಣದ ಐದು ರಾಜ್ಯಗಳಿಗೆ ಸಿಗಲಿದ್ದ ಸುವರ್ಣಾವಕಾಶವನ್ನು ಡಿಎಂಕೆ ಹಾಳು ಮಾಡಿದೆ. ನಮಗೆ ಸಿಗಲಿದ್ದ ಉತ್ತಮ ಪಾಲು ಸಿಗದಂತೆ ಆ ಪಕ್ಷ ಮಾಡಿ ಅನ್ಯಾಯವೆಸಗಿದೆ. ಕರ್ನಾಟಕದ ಲೋಕಸಭೆ ಕ್ಷೇತ್ರಗಳ ಸಂಖ್ಯೆ 28ರಿಂದ 42ಕ್ಕೆ ಹೆಚ್ಚುತ್ತಿತ್ತು. ಈ ಅವಕಾಶ ತಪ್ಪಿಹೋಗಿದೆ. ಇದನ್ನು ಡಿಎಂಕೆ ಅಥವಾ ಕಾಂಗ್ರೆಸ್‌ ಪಕ್ಷಗಳಿಂದ ಸರಿಪಡಿಸಲು ಸಾಧ್ಯವೇ? ಈ ಬ್ಗಗೆ ರಾಹುಲ್‌ ಗಾಂಧಿ ಉತ್ತರಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಪ್ರತೀರಾಜ್ಯಕ್ಕೂ ಶೇ.50ರ ಅನುಪಾತದಲ್ಲಿ ಕ್ಷೇತ್ರಗಳನ್ನು ಹೆಚ್ಚಿಸಿದಾಗ ಉತ್ತರದ ಕೆಲ ರಾಜ್ಯಗಳ ಸಂಖ್ಯೆಯ ಬಗ್ಗೆ ಸುಳ್ಳು ಸಂಕಥನಗಳನ್ನು ಸ್ವತಃ ಕಾಂಗ್ರೆಸ್‌ ಹಾಗೂ ಅದರ ಮಿತ್ರಪಕ್ಷಗಳು ವ್ಯವಸ್ಥಿತವಾಗಿ ಹರಡಿದವು. ಡಿಎಂಕೆ ಹಠಮಾರಿತನದಿಂದ ಐದು ದಕ್ಷಿಣ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಿದೆ. ನೆಹರು ಕಾಲದಿಂದ ನಡೆದುಕೊಂಡು ಬಂದ ಡಿಲಿಮಿಟೇಶನ್‌ ವ್ಯವಸ್ಥೆ ಸುಧಾರಣೆಗೆ ಬೆಂಬಲ ನೀಡುವ ಬದಲು, ತನ್ನ ರಾಜ್ಯದ ಮತದಾರರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡಿತು. ಕರ್ನಾಟಕ, ಕೇರಳಂ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಸ್ವತಃ ತಮಿಳುನಾಡಿಗೆ ಆಗಿರುವ ಈ ಐತಿಹಾಸಿಕ ಅನ್ಯಾಯಕ್ಕೆ ನೇರವಾಗಿ ಡಿಎಂಕೆ ಪಕ್ಷವೇ ಕಾರಣ ಎಂದು ಅವರು ಅರೋಪಿಸಿದರು.

ದೊಡ್ಡ ಬ್ರದರ್‌, ಚಿಕ್ಕ ಬ್ರದರ್‌ ನಡುವೆ ಹೊಂದಾಣಿಕೆ ಇಲ್ಲ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಕಿತ್ತಾಡುತ್ತಿವೆ. ನಾವೇ ಸ್ವಂತ ಬಲದಿಂದ ಸರಕಾರ ಮಾಡುತ್ತೇವೆ ಎಂದು ಆ ರಾಜ್ಯದ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗೆಯೇ, ತಮಿಳುನಾಡಿನಲ್ಲಿ ದೊಡ್ಡ ಬ್ರದರ್‌ (ಸ್ಟಾಲಿನ್) ಮತ್ತು ಚಿಕ್ಕ ಬ್ರದರ್‌ (ರಾಹುಲ್‌ ಗಾಂಧಿ)‌ ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಚುನಾವಣೆ ಪ್ರಚಾರದಲ್ಲಿ ಯಾವುದೇ ಕಾರಣಕ್ಕೂ ಚಿಕ್ಕ ಬ್ರದರ್‌ ಜತೆ ವೇದಿಕೆ ಹತ್ತುವುದಿಲ್ಲ ಎಂದು ದೊಡ್ಡ ಬ್ರದರ್‌ ಶಪಥ ಮಾಡಿದ್ದಾರೆ. ವಾಸ್ತವ ಸ್ಥಿತಿ ಹೀಗಿರುವಾಗ ಈ ಮೈತ್ರಿಕೂಟದಿಂದ ರಾಷ್ಟ್ರದ ಜನತೆಗೆ, ಅದರಲ್ಲೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆಯೇ? ಎಂದು ಸಚಿವ ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕ್ಷೇತ್ರ ಮರು ವಿಂಗಡಣೆ ನಡೆಯುತ್ತಿರುವುದು ಇದೇ ಮೊದಲಲ್ಲ. ನೆಹರು ಅವರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಮೋದಿ ಅವರು ಬಂದು ಹೊಸದಾಗಿ ಮಾಡಿದ್ದಲ್ಲ. ಈ ಉದ್ದೇಶಕ್ಕಾಗಿ ರಚಿಸುವ ಆಯೋಗಕ್ಕೆ ರಾಜ್ಯ ವಿಧಾನಸಭೆಗಳ ಸ್ಪೀಕರ್‌ʼಗಳು ಹಾಗೂ ಲೋಕಸಭೆ ಸ್ಪೀಕರ್‌ ಸೇರಿ ಸದಸ್ಯರನ್ನು ನೇಮಕ ಮಾಡುತ್ತಾರೆ. ಆ ಆಯೋಗ ವರದಿ ನೀಡಿದ ನಂತರ ಅದರ ಬಗ್ಗೆ ಸಂಸತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಎಷ್ಟು ಸಲ ಕ್ಷೇತ್ರ ಮರು ವಿಂಗಡಣೆ ಆಗಿದೆ ಎನ್ನುವುದು ರಾಹುಲ್‌ ಗಾಂಧಿಗೆ ಗೊತ್ತಿಲ್ಲವೇ? ದುರಂತವೆಂದರೆ, ಈ ಪಕ್ಷಕ್ಕೆ ವ್ಯವಸ್ಥೆ ಮೇಲೆಯೇ ನಂಬಿಕೆ ಇಲ್ಲ ಎಂದು ಸಚಿವರು ವಾಗ್ದಾಳಿ ನಡೆಸಿದರು.

ರಾಷ್ಟ್ರದಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಘೋರ ಅನ್ಯಾಯವನ್ನು ಕಾಂಗ್ರೆಸ್‌ ಮೈತ್ರಿಕೂಟ ಮಾಡಿದೆ. ಇದಕ್ಕೆ ಕ್ಷಮೆ ಇಲ್ಲ. ಮುಂದಿನ ದಿನಗಳಲ್ಲಿ ಮಹಿಳೆಯರೇ ಇವರಿಗೆಲ್ಲಾ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಗ್ರೇಟರ್‌ ಬೆಂಗಳೂರು; ಕಾಂಗ್ರೆಸ್ಸಿಗೆ ಕುಟುಕಿದ ಕೇಂದ್ರ ಸಚಿವರು

ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಕರ್ನಾಟಕ ಕಾಂಗ್ರೆಸ್‌ ಸರಕಾರ ಬಿಬಿಎಂಪಿಯನ್ನು ತೆಗೆದು ಗ್ರೇಟರ್‌ ಬೆಂಗಳೂರು ಎಂದು ಮಾಡಿದೆ. ನಂತರ ಐದು ವಿಭಾಗಗಳು, ವಾರ್ಡುಗಳ ರಚನೆ ಹಾಗೂ ಕೆಟಗರಿ ಹಂಚಿಕೆ ಇವೆಲ್ಲವನ್ನು ಸರ್ವಪಕ್ಷಗಳನ್ನು ಕರೆದು ಚರ್ಚಿಸಿ ಮಾಡಿತೇ? ತಮ್ಮಿಚ್ಛೆಗೆ ತಕ್ಕಂತೆ ಮಾಡಿದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಆದೇಶವಿತ್ತೋ ಅಥವಾ ನಗರದ ಜನರ ಒತ್ತಾಯವಿತ್ತೋ? ಇಂಥ ಕಾಂಗ್ರೆಸ್ಸಿಗೆ ಮೋದಿ ಅವರನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ಪಹಲ್ಗಾಮ್ ಕರಾಳ ದಾಳಿಗೆ ಒಂದು ವರ್ಷ: ಇನ್ನೂ ಕಾಶ್ಮೀರ ಕಣಿವೆಯಲ್ಲಿ ಮಾಸಿಲ್ಲ ಭೀತಿಯ ನೆರಳು!

BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 17 ಕಾರ್ಮಿಕರ ದುರ್ಮರಣ

Share. Facebook Twitter LinkedIn WhatsApp Email

Related Posts

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM2 Mins Read

ಸಚಿವ ಜಮೀರ್ ಅಹ್ಮದ್ ಜೆಡಿಎಸ್ ಸೇರೋದು ಗಾಳಿ ಸುದ್ದಿ: ಮತ್ತೆ ಮಾಡಿದ ತಪ್ಪು ಮಾಡಲ್ಲವೆಂದ HDK

19/04/2026 4:47 PM1 Min Read

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

19/04/2026 4:22 PM1 Min Read
Recent News

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಇಬ್ಬರು ಪ್ರಜೆಗಳ ವಶ: ಬ್ಯಾಗ್‌ನಲ್ಲಿ ಪತ್ತೆಯಾಯ್ತು ಸ್ಯಾಟಲೈಟ್ ಫೋನ್!

19/04/2026 5:26 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 17 ಕಾರ್ಮಿಕರ ದುರ್ಮರಣ

19/04/2026 5:23 PM

ಪಹಲ್ಗಾಮ್ ಕರಾಳ ದಾಳಿಗೆ ಒಂದು ವರ್ಷ: ಇನ್ನೂ ಕಾಶ್ಮೀರ ಕಣಿವೆಯಲ್ಲಿ ಮಾಸಿಲ್ಲ ಭೀತಿಯ ನೆರಳು!

19/04/2026 5:14 PM
State News
KARNATAKA

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

By kannadanewsnow0919/04/2026 5:24 PM KARNATAKA 3 Mins Read

ನವದೆಹಲಿ: ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ…

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

ಸಚಿವ ಜಮೀರ್ ಅಹ್ಮದ್ ಜೆಡಿಎಸ್ ಸೇರೋದು ಗಾಳಿ ಸುದ್ದಿ: ಮತ್ತೆ ಮಾಡಿದ ತಪ್ಪು ಮಾಡಲ್ಲವೆಂದ HDK

19/04/2026 4:47 PM

BIG NEWS : ಯಾರು ಧರ್ಮ ಬೇಡ ಅಂತ ಹೇಳಲ್ಲ ಆದರೆ ಅವರವರ ಧರ್ಮ ಕಾಪಾಡುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

19/04/2026 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.