ಬೀದರ್ : ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬಿಸಿಲಿನ ತಾಪ ತಾಳಲಾರದೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಬೀದರ್ ಜಿಲ್ಲೆಯ ಕಮಲನಗರದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಮೀರ್ ಲಾಯಿಕ್ ಅಹ್ಮದ್ (20) ಮೃತಪಟ್ಟ ದುರ್ದೈವಿ. ಈತ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಸಾವನ್ನಪ್ಪಿದ್ದಾನೆ.
ಸಮೀರ್ಗೆ ಬಿಸಿಲಿನಿಂದಾಗಿ ವಿಪರೀತ ತಲೆತಿರುಗುವಿಕೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತ ಸ್ವಲ್ಪ ಸಮಯ ವಿಶ್ರಾಂತಿ ಪಡೆದಿದ್ದನು. ವಿಶ್ರಾಂತಿಯ ನಂತರ ಮರಳಿ ಡಿಗ್ಗಿ ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾನೆ.








