ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಕಲ್ಯಾಣ ಕರ್ನಾಟಕ ಮತ್ತು ಇತರ ಮೂಲ ವೃಂದ ಸೇರಿ ಎಲ್ಲರಿಗೂ ಅರ್ಜಿ ಸಲ್ಲಿಸಲು ಮೇ10 ಕೊನೆ ದಿನ. ಶುಲ್ಕ ಪಾವತಿಗೆ ಮೇ 12 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಳಿಕೆ ಮೂಲ ವೃಂದದ, ಗ್ರೂಪ್- ಬಿ ಗೆ ಸೇರಿದ ಒಟ್ಟು 632 ಹುದ್ದೆಗಳಿಗೆ (81 ಕೃಷಿ ಅಧಿಕಾರಿ ಹಾಗೂ 551 ಸಹಾಯಕ ಕೃಷಿ ಅಧಿಕಾರಿ) ಜೂನ್ 7ರಂದು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 258 ಹುದ್ದೆಗಳಿಗೆ (40 ಕೃಷಿ ಅಧಿಕಾರಿ ಹಾಗೂ 218 ಸಹಾಯಕ ಕೃಷಿ ಅಧಿಕಾರಿ) ಜೂನ್ 14ರಂದು ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ವೃಂದದವರಿಗೆ ಕನ್ನಡ ಪರೀಕ್ಷೆ ಜೂನ್ 6ರಂದು ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡಲು ಕೋರಲಾಗಿದೆ.








