Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

​ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ಕೋರ್ಟ್‌ನಲ್ಲಿ ಹಿನ್ನಡೆ; ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನ್ಯಾಯಾಲಯ ನಿರಾಕರಣೆ!

20/04/2026 7:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ
KARNATAKA

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

By kannadanewsnow0920/04/2026 7:26 PM

ಮಂಡ್ಯ : ಉದ್ಯೋಗದ ನಿರೀಕ್ಷೆಯಲ್ಲಿರುವ ಮದ್ದೂರು ನಗರ ಮತ್ತು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ.

ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏಪ್ರಿಲ್ 21 ರ ಮಂಗಳವಾರ ದಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮದ್ದೂರು ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮಹತ್ವದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳು ವಂತೆ ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ಮನವಿ ಮಾಡಿದರು.

ಉದ್ಯೋಗ ಮೇಳದ ಮುಖ್ಯಾಂಶಗಳು

ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿವೆ. ಈ ಬೃಹತ್ ಮೇಳದಲ್ಲಿ ಬರೋಬ್ಬರಿ 5000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷವಾಗಿದೆ.

ವಿದ್ಯಾರ್ಹತೆ ಏನು

ಈ ಉದ್ಯೋಗ ಮೇಳವು ಕೇವಲ ಉನ್ನತ ವ್ಯಾಸಂಗ ಮಾಡಿದವರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ವಿಶೇಷವಾಗಿ ಅಂಗವಿಕಲರಿಗೂ ಸಹ ಉದ್ಯೋಗಗಳು ಲಭ್ಯವಿದೆ ಎಂದರು.

ಯಾವೆಲ್ಲ ಕ್ಷೇತ್ರಗಳಲ್ಲಿ ಉದ್ಯೋಗ ಲಭ್ಯ

ಉತ್ಪಾದನಾ ವಲಯ, ಬ್ಯಾಂಕಿಂಗ್, ಮಾರಾಟ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಗಾರ್ಮೆಂಟ್ಸ್, ಸೇವಾ ವಲಯ, ಪ್ರವಾಸೋದ್ಯಮ, ಹಣಕಾಸು ಹಾಗೂ ನಿರ್ವಹಣಾ ಕ್ಷೇತ್ರ ಸೇರಿದಂತೆ ಹತ್ತು ಹಲವು ವಿಭಾಗಗಳಲ್ಲಿ ಅಭ್ಯರ್ಥಿಗಳು ತಮ್ಮ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಭಾಗವಹಿಸುವುದು ಹೇಗೆ

18 ವರ್ಷದಿಂದ 30 ದೊಳಗಿನ ಯಾವುದೇ ವಿದ್ಯಾರ್ಹತೆ ಹೊಂದಿರುವ ಯುವಕ ಹಾಗೂ ಯುವತಿ ಅಭ್ಯರ್ಥಿಗಳು ಈ ಮೇಳದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಮೊದಲೇ ಕಛೇರಿಗೆ ಭೇಟಿ ಕೊಟ್ಟು ಪೂರ್ವ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಥವಾ ಏ.21 ರಂದು ನೇರವಾಗಿ ಉದ್ಯೋಗ ಮೇಳ ನಡೆಯುವ ಸ್ಥಳಕ್ಕೆ ತಮ್ಮ ಎಲ್ಲಾ ಶೈಕ್ಷಣಿಕ ದಾಖಲಾತಿಗಳು ಹಾಗೂ ರೆಸ್ಯೂಮ್‌ನೊಂದಿಗೆ ( 10 ಪ್ರತಿಗಳು ) ಹಾಜರಾಗಿ, ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ಮಾತನಾಡಿ, ಮದ್ದೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಯುವಜನತೆಗೆ ಉದ್ಯೋಗದ ದಾರಿಯನ್ನು ತೆರೆದಿಡುವುದು ಈ ಮೇಳದ ಪ್ರಮುಖ ಉದ್ದೇಶವಾಗಿದೆ. ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದು, ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಲಿದೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸುಧಾಕರ್ – 8792143221
ದೇವರಾಜ್ – 7996163105
ಕಛೇರಿ – 7899488488

ವರದಿ : ಗಿರೀಶ್ ರಾಜ್, ಮಂಡ್ಯ

ಹಲ್ಲಿಗಳನ್ನು ಓಡಿಸಲು ವಿಷಕಾರಿ ಸ್ಪ್ರೇ ಬೇಡ: ಈ ಸರಳ, ನೈಸರ್ಗಿಕ ಉಪಾಯಗಳನ್ನು ಅನುಸರಿಸಿ ನೋಡಿ

Share. Facebook Twitter LinkedIn WhatsApp Email

Related Posts

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM2 Mins Read

ಬೆಂಗಳೂರಿನ ಹೃದಯಭಾಗದಲ್ಲಿ ಕುಂಬ್ಳೆ ‘ಕನಸಿನ ಅರಮನೆ’: ಐಷಾರಾಮಿ ಮನೆಯ ವಿಶೇಷತೆಗಳು ಇಲ್ಲಿವೆ

20/04/2026 6:40 PM2 Mins Read

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM1 Min Read
Recent News

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

​ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ಕೋರ್ಟ್‌ನಲ್ಲಿ ಹಿನ್ನಡೆ; ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನ್ಯಾಯಾಲಯ ನಿರಾಕರಣೆ!

20/04/2026 7:20 PM

ಹಲ್ಲಿಗಳನ್ನು ಓಡಿಸಲು ವಿಷಕಾರಿ ಸ್ಪ್ರೇ ಬೇಡ: ಈ ಸರಳ, ನೈಸರ್ಗಿಕ ಉಪಾಯಗಳನ್ನು ಅನುಸರಿಸಿ ನೋಡಿ

20/04/2026 7:15 PM
State News
KARNATAKA

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

By kannadanewsnow0920/04/2026 7:37 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-2026) ಸಂಬಂಧಿಸಿದಂತೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ…

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

ಬೆಂಗಳೂರಿನ ಹೃದಯಭಾಗದಲ್ಲಿ ಕುಂಬ್ಳೆ ‘ಕನಸಿನ ಅರಮನೆ’: ಐಷಾರಾಮಿ ಮನೆಯ ವಿಶೇಷತೆಗಳು ಇಲ್ಲಿವೆ

20/04/2026 6:40 PM

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.