ಶಿವಮೊಗ್ಗ: ನಾಳೆ ಸಾಗರ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದ್ದು, ಮಾನ್ಯ ಮುಖ್ಯಮಂತ್ರಿಗಳ ‘ಅಮೃತ ನಗರೋತ್ಥಾನ’ ಯೋಜನೆಯಡಿ (ಹಂತ-4) ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಾಗರ ನಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ನಡೆಯಲಿದೆ.
ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ವಿವರ:
-
ದಿನಾಂಕ: 21-04-2026 (ಮಂಗಳವಾರ)
-
ಸಮಯ: ಬೆಳಿಗ್ಗೆ 10:30 ಗಂಟೆಗೆ
-
ಸ್ಥಳ: ಜೋಸೆಫ್ ನಗರ, (ಮಚಾಡೊ ಆಟೋ ಸರ್ಕಲ್) ಸಾಗರ.
ಈ ಭಾಗದ ದಶಕಗಳ ಬೇಡಿಕೆಯಾಗಿದ್ದ ಸುಸಜ್ಜಿತ ಚರಂಡಿ ವ್ಯವಸ್ಥೆಗೆ ಈಗ ಚಾಲನೆ ಸಿಗುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಸಂತಸ ತಂದಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು, ವಾರ್ಡಿನ ಪ್ರಮುಖರು, ಸಾಗರ ನಗರಸಭೆಯ ಅಧಿಕಾರಿಗಳು ಸೇರಿದಂತೆ ಇತರೆ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು








