ಕಮ್‌ಜಾಂಗ್:ಮಣಿಪುರ ರಾಜ್ಯದ ಕಮ್‌ಜಾಂಗ್ ಜಿಲ್ಲೆಯಲ್ಲಿ ಮಂಗಳವಾರ (ಏಪ್ರಿಲ್ 21, 2026) ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದ್ದು, ಮುಂಜಾನೆ 5:59ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಕಮ್‌ಜಾಂಗ್ ಜಿಲ್ಲೆಯಾಗಿದ್ದು, ಭೂಮಿಯ ಮೇಲ್ಮೈಯಿಂದ ಸುಮಾರು 62 ಕಿಲೋಮೀಟರ್ ಆಳದಲ್ಲಿ ಕಂಪನ ಉಂಟಾಗಿದೆ.ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಸದ್ಯದ ವರದಿಗಳ ಪ್ರಕಾರ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ.
ಅನುಭವ: ಕಮ್‌ಜಾಂಗ್ ಮಾತ್ರವಲ್ಲದೆ ರಾಜ್ಯದ ರಾಜಧಾನಿ ಇಂಫಾಲ ಮತ್ತು ನೆರೆಯ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ.
ಮುಂಜಾನೆಯ ಗಾಢ ನಿದ್ರೆಯಲ್ಲಿದ್ದ ಜನರು ಕಂಪನದ ಅನುಭವವಾಗುತ್ತಿದ್ದಂತೆ ಭಯಗೊಂಡು ಮನೆಗಳಿಂದ ಹೊರಗೆ ಓಡಿಬಂದರು.








