ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಎಂಬ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾಗಿದೆ.
ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಡಿಪೋಗೆ ಈ ಒಂದು ಕೆ ಎಸ್ ಆರ್ ಟಿ ಸಿ ಬಸ್ ಸೇರಿತ್ತು. ಹೊಸದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಬಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಪಲ್ಟಿಯಾದ ಅರಸಕ್ಕೆ ಸರ್ಕಾರಿ ಬಸ್ ಸಂಪೂರ್ಣ ನುಜ್ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








