ಮಹಾರಾಷ್ಟ್ರ : ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರವಾದೆ ಅಗ್ನಿ ಅವಘಡ ಸಂಭವಿಸಿದೆ ಈ ಒಂದು ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪಿದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆಗೆ ಕಾರ್ಖಾನೆಯಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.








