ಮೈಸೂರು : ಇತ್ತೀಚಿಗೆ ಕಾವೇರಿ ನದಿಯಲ್ಲಿ ದರ್ಗಾ ನೋಡಲು ಬಂದ ಆರು ಜನರು ನೀರಲ್ಲಿ ಮುಳುಗಿ ಸಾವನಪ್ಪಿದ್ದ ಘಟನೆ ನಡೆದಿತ್ತು ಈ ಒಂದು ಘಟನೆ ಮಾಸುವ ಮುನ್ನವೇ, ಪ್ರವಾಸಕ್ಕೆ ಬಂದಿದ್ದ ವೇಳೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ, ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ,(16 ) ಮೃತರು. ನೀರಿನಲ್ಲಿ ಮುಳುಗಿ ಗಂಭೀರ ಸ್ಥಿತಿಯಲ್ಲಿರುವ ಸುಚಿತ್ರಾಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ತಲಕಾಡಿನ ನಿಸರ್ಗಧಾಮ ನೋಡಲು, ಬೆಂಗಳೂರಿನಿಂದ ಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ 72 ವಿದ್ಯಾರ್ಥಿಗಳ ಪೈಕಿ, ಈ ಮೂವರು ತಲಕಾಡಿನ ಕಾವೇರಿ ನದಿಯ ನೀರಿನಲ್ಲಿ ಈಜಾಡುವಾಗ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾರೆ.
ಇಬ್ಬರು ನೀರಿನಲ್ಲಿ ಮುಳುಗಿ ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಯಿತು. ಇಬ್ಬರು ವಿದ್ಯಾರ್ಥಿನಿಯರ ಸಾವಿನ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರದಿಂದ ಮಂಗಳವಾರದ ಮೂರು ದಿನದಲ್ಲಿ ಒಟ್ಟು 11 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.








