ಜಿನೀವಾ:ಭಾರತದಲ್ಲಿ ಕಾಣಿಸಿಕೊಳ್ಳುತ್ತಿರುವ ಅತಿಯಾದ ತಾಪಮಾನವು ದೇಶದ ಪ್ರಮುಖ ಆಹಾರ ಬೆಳೆಯಾದ ಅಕ್ಕಿ ಉತ್ಪಾದನೆಯ ಮೇಲೆ ಭೀಕರ ಪರಿಣಾಮ ಬೀರಲಿದೆ ಎಂದು ವಿಶ್ವಸಂಸ್ಥೆಯ ಇತ್ತೀಚಿನ ವರದಿ ಎಚ್ಚರಿಸಿದೆ. ಕೇವಲ ಬೆಳೆ ಮಾತ್ರವಲ್ಲದೆ, ಬಿಸಿಲ ಬೇಗೆಯಲ್ಲಿ ದುಡಿಯುವ ಲಕ್ಷಾಂತರ ಕೃಷಿ ಕಾರ್ಮಿಕರ ಜೀವಕ್ಕೂ ಇದು ಅಪಾಯ ತಂದೊಡ್ಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ತೀವ್ರ ಶಾಖದ ಅಲೆಗಳಿಂದಾಗಿ ಭತ್ತದ ಬೆಳವಣಿಗೆ ಕುಂಠಿತಗೊಳ್ಳಲಿದ್ದು, ಇಳುವರಿಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ. ಇದು ಭಾರತದ ಆಹಾರ ಭದ್ರತೆ ಮತ್ತು ಜಾಗತಿಕ ರಫ್ತು ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಲಿದೆ.
ಹೊಲಗದ್ದೆಗಳಲ್ಲಿ ನೇರ ಬಿಸಿಲಿನಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರು ‘ಹೀಟ್ ಸ್ಟ್ರೋಕ್’ (ಬಿಸಿಲ ಘಾತ) ಮತ್ತು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸದ ಅವಧಿ ಮತ್ತು ಉತ್ಪಾದನಾ ಸಾಮರ್ಥ್ಯ ಕಡಿಮೆಯಾಗುತ್ತಿದೆ.
ಭಾರತದ ಅನೇಕ ಭಾಗಗಳಲ್ಲಿ ತಾಪಮಾನವು 44°C ದಾಟುತ್ತಿರುವುದು ಬೆಳೆಗಳ ಪರಾಗಸ್ಪರ್ಶ ಕ್ರಿಯೆಗೆ ಅಡ್ಡಿಯಾಗುತ್ತಿದೆ, ಇದು ಅಂತಿಮವಾಗಿ ಧಾನ್ಯದ ಗುಣಮಟ್ಟ ಮತ್ತು ಪ್ರಮಾಣವನ್ನು ಕುಗ್ಗಿಸುತ್ತಿದೆ








