ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ ಶೇಕಡ 90ರಷ್ಟು ಈ ಬಾರಿ ಫಲಿತಾಂಶ ದಾಖಲಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದವು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಫಲಿತಾಂಶ ರವನಿಸಲಾಗುತ್ತದೆ.
ಇನ್ನು ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು 7 ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625 ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದಾವಣಗೆರೆಯ ಭರತ್, ಚಿಕ್ಕಮಂಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯ, ರಾಯಚೂರಿನ ಸುಖದೇವ್ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಾಲಕರು ಉತ್ತಮವಾದ ಸಾಧನೆ ಮಾಡಿದ್ದಾರೆ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡ 91 ರಷ್ಟು ಫಲಿತಾಂಶ ಬಂದಿದೆ ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದಲ್ಲಿ ಪ್ರಗತಿಯಾಗಿದೆ ಇನ್ನು ಗ್ರಾಮೀಣ ಭಾಗದಲ್ಲಿ ಸಹ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ ಗ್ರಾಮೀಣ ಭಾಗದಲ್ಲಿ 92 ರಷ್ಟು ಫಲಿತಾಂಶ ಬಂದಿದೆ ನಗರಕ್ಕಿಂತ ಗ್ರಾಮೀಣ ಭಾಗದ ಮಕ್ಕಳೇ ಹೆಚ್ಚು ಸಾಧನೆ ಮಾಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.








