ಹಾಸನ : ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಉದ್ದೂರು ಹೊಸಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಯಾವುದೇ ಕಾರಣಕ್ಕೂ ಆ ವಿಷಯವನ್ನು ನನ್ನ ಮುಂದೆ ಹೇಳಬೇಡಿ. ಅವರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಈಗಾಗಲೇ ಅನುಭವಿಸಿದ್ದೇನೆ. ರಾಜಕೀಯದಲ್ಲಿ ಶಕ್ತಿ ಬರುತ್ತೆ ಅಂತ ಹೇಳಿ ಈ ಕೆಲಸಕ್ಕೆ ಕೈ ಹಾಕುವುದಿಲ್ಲ. ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ. ಕಾಂಗ್ರೆಸ್ಸಿಗರು ಅನ್ನ ತಿನ್ನುತ್ತಿರುವುದು ಆ ವರ್ಗದವರಿಂದ ಅಂತಿದ್ದಾರೆ. ನಿತ್ಯ ಅಣ್ಣ ತಿನ್ನುತ್ತಿರುವುದೇ ಆ ವರ್ಗದ ಜನರಿಂದ ಅಂತ ಹೇಳುತ್ತಿದ್ದಾರೆ. ಕಾಂಗ್ರೆಸ್ನವರು ಯಾರಾದರೂ ಅದನ್ನು ವಿರೋಧ ಮಾಡಿದ್ದೀರಾ? ಎಲ್ಲೆಲ್ಲಿಗೆ ಹೋಗುತ್ತೋ ನೋಡೋಣ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.








