ನವದೆಹಲಿ: ದೆಹಲಿಯ ಕೈಲಾಶ್ ಹಿಲ್ಸ್ ಪ್ರದೇಶದಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯ ವೇಳೆ ಅತ್ಯಂತ ಭಯಾನಕ ವಿಚಾರಗಳು ಬೆಳಕಿಗೆ ಬಂದಿವೆ. ಆರೋಪಿ ಕೇವಲ ಕೃತ್ಯ ಎಸಗಿದ್ದು ಮಾತ್ರವಲ್ಲದೆ, ಸಾಕ್ಷ್ಯ ನಾಶಪಡಿಸಲು ಅತ್ಯಂತ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.
ಆರೋಪಿಯು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ನಂತರ, ಆಕೆ ಕಿರುಚಾಡದಂತೆ ತಡೆಯಲು ಮನೆಯಲ್ಲಿದ್ದ ಕೇಬಲ್ ವೈರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದಾನೆ.
ಕೊಲೆಯ ನಂತರ ಆರೋಪಿಯ ಬಟ್ಟೆಗಳ ಮೇಲೆ ರಕ್ತದ ಕಲೆಗಳಾಗಿದ್ದವು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಆತ ತನ್ನ ರಕ್ತಸಿಕ್ತ ಬಟ್ಟೆಗಳನ್ನು ಕಳಚಿ, ಮನೆಯಲ್ಲಿದ್ದ ಬೇರೆ ಬಟ್ಟೆಗಳನ್ನು ಧರಿಸಿ ಅಲ್ಲಿಂದ ಪರಾರಿಯಾಗಿದ್ದ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ ಮತ್ತು ಮೊಬೈಲ್ ಲೊಕೇಶನ್ ಆಧಾರದ ಮೇಲೆ ದೆಹಲಿ ಪೊಲೀಸರು ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮೃತ ಮಹಿಳೆಯ ಪರಿಚಯಸ್ಥನೆಂದು ಗುರುತಿಸಲಾಗಿದ್ದು, ಪೂರ್ವಯೋಜಿತವಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.








