ಬಾಗಲಕೋಟೆ : ಬಾಗಲಕೋಟೆಯಲ್ಲಿ ನಿಂತರವಾದ ಕೊಲೆ ಆಗಿದ್ದು ಮನೆಯ ಅಂಗಳದಲ್ಲಿ ಮಲಗಿಕೊಂಡಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಂಗಳ ಎಂಬ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜನತಾ ಪ್ಲಾಟ್ ಪ್ರದೇಶದ ಮನೆಯವರ ಅಂಗಳದಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಮೃತ ವ್ಯಕ್ತಿಯನ್ನು ಗ್ರಾಮದ ಅಶೋಕ ಕೋಳಿ (35) ಎಂದು ಗುರುತಿಸಲಾಗಿದೆ. ಮುಖ ಸಂಪೂರ್ಣ ನಜ್ಜುಗುಜ್ಜಗಿದೆ.ಘಟನೆಯಲ್ಲಿ ಉತ್ತಮ ಶಿಂದೆ (40) ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಅವರನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.








