ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಲಹಂಕದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಗೆ ಎದುರುಗಡೆಯಿಂದ ಬಂದ ಇಬ್ಬರೂ ಪುಂಡರು ಖಾಸಗಿ ಅಂಗಕ್ಕೆ ಮುಟ್ಟಿ ಅಸಭ್ಯವಾಗಿ ವರ್ತನೆ ತೋರಿದ್ದ ಘಟನೆ ವರದಿಯಾಗಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪುಂಡರನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಯಲಹಂಕ ಪೊಲೀಸರಿಂದ ಫುಡ್ ಡೆಲಿವರಿ ಬಾಯ್ ಹರೀಶ್ ಮತ್ತು ಪ್ರಜ್ವಲ್ ಎಂಬಂತರನ್ನು ಅರೆಸ್ಟ್ ಮಾಡಿದ್ದಾರೆ. ಯುವತಿಯ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ ಬೆಂಗಳೂರಿನ ಕೋಗಿಲು ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿತ್ತು. ಯುವಕರ ಪುಂಡಾಟ ಕಾರಿನ ಡ್ಯಾಶ್ ಕ್ಯಾಮರದಲ್ಲಿ ಸರಿಯಾಗಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಇದೀಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.








