ಬೆಂಗಳೂರು: ನಗರದ ಬಿಎಂಟಿಸಿ ಬಸ್ಗಳ ಅಜಾಗರೂಕ ಚಾಲನೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದಾರೆ. ಶನಿವಾರ ನಗರದ ಉತ್ತರಹಳ್ಳಿ ಮುಖ್ಯ ರಸ್ತೆಯ ಶ್ರೀನಿವಾಸಪುರ ಕ್ರಾಸ್ ಬಳಿ ಬಿಎಂಟಿಸಿ ಬಸ್ ಚಕ್ರ ಹರಿದ ಪರಿಣಾಮ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ವಿವರ: ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಸಿರಿಶಾ ಅವರು ತಮ್ಮ ಸ್ಕೂಟರ್ನಲ್ಲಿ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ, ಪಕ್ಕದಲ್ಲೇ ಬರುತ್ತಿದ್ದ ಬಿಎಂಟಿಸಿ ಬಸ್ಗೆ ಸ್ಕೂಟರ್ ಹ್ಯಾಂಡಲ್ ತಗುಲಿದೆ. ಇದರಿಂದ ನಿಯಂತ್ರಣ ತಪ್ಪಿ ಅವರು ರಸ್ತೆಗೆ ಬಿದ್ದಿದ್ದಾರೆ. ದುರದೃಷ್ಟವಶಾತ್, ಅದೇ ಕ್ಷಣದಲ್ಲಿ ಬಸ್ಸಿನ ಹಿಂಬದಿಯ ಚಕ್ರಗಳು ಆಕೆಯ ಮೇಲೆ ಹರಿದಿದ್ದು, ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಾಲಕ ವಶಕ್ಕೆ: ಘಟನೆ ಸಂಭವಿಸಿದ ತಕ್ಷಣ ಕೆಂಗೇರಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್.ಆರ್. ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ರಸ್ತೆಯಲ್ಲಿ ಬಿಎಂಟಿಸಿ ಬಸ್ಗಳ ಅತಿವೇಗ ಮತ್ತು ಅಜಾಗರೂಕತೆಯ ಬಗ್ಗೆ ಸ್ಥಳೀಯ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
16 ಬೌಂಡರಿ, 9 ಸಿಕ್ಸರ್, 152 ರನ್: ಐಪಿಎಲ್ ನಲ್ಲಿ ಕನ್ನಡಿಗ ಕೆಎಲ್ ರಾಹುಲ್ ಮತ್ತೊಂದು ಹೊಸ ದಾಖಲೆ
BIG NEWS: ಮುಂದಿನ ದಿನಗಳಲ್ಲಿ ಅಪಮೃತ್ಯು ಭಯ, ಆಹಾರದ ಕ್ಷಾಮ; ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!








