ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಬರ್ತಡೆ ಪಾರ್ಟಿಯಲ್ಲಿ ಕೇಕ್ ವಿಚಾರಕ್ಕೆ ಜಗಳ ಆಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇಕ್ ವಿಚಾರವಾಗಿ ನಡೆದ ಜಗಳದಲ್ಲಿ ಗುಂಡಿನ ದಾಳಿ ನಡೆದಿದ್ದು 3 ಸಾವನಪ್ಪಿದ್ದಾರೆ.
ಉತ್ತರಪ್ರದೇಶದ ಬುಲೆಂದ ಶಹರ್ನ ಖುರ್ಜಾದಲ್ಲಿ ಈ ಒಂದು ಘಟನೆ ನಡೆದಿದೆ. ಬರ್ತಡೆ ಪಾರ್ಟಿಯಲ್ಲಿ ಮುಖಕ್ಕೆ ಕೇಕ್ ಬಳಿಯುವ ವಿಚಾರಕ್ಕೆ ಗಲಾಟೆ ಆಗಿದೆ ಈ ವೇಳೆ ಗುಂಡಿನ ದಾಳಿ ನಡೆಸಿ ಮೂರು ಯುವಕರು ಸಾವನಪ್ಪಿದ್ದಾರೆ. ಉತ್ತರ ಪ್ರದೇಶದಲ್ಲಿ ಸಂಭ್ರಮದ ಹುಟ್ಟುಹಬ್ಬದ ಪಾರ್ಟಿಯು ದುರಂತದಲ್ಲಿ ಅಂತ್ಯಗೊಂಡಿದೆ. ಕೇವಲ ಕೇಕ್ ವಿಚಾರವಾಗಿ ಸ್ನೇಹಿತರ ನಡುವೆ ಉಂಟಾದ ಸಣ್ಣ ಜಗಳ ವಿಕೋಪಕ್ಕೆ ಹೋಗಿ, ಗುಂಡಿನ ದಾಳಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.








