ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ಓಝೂನ್ ಬಡಾವಣೆ ಗೇಟ್ ಬಳಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸಪೆಕ್ಟರ್ ರಾಕೇಶ್ ದೌರ್ಜನ್ಯ ನಡೆಸಿರುವುದು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾತ್ರಿ ಅಂಗಡಿ ಮುಚ್ಚುವುದು ಸ್ವಲ್ಪ ತಡವಾಗಿದೆ. ಈ ಕಾರಣಕ್ಕೆ ಹುಡುಗನನ್ನು ಅಂಗಡಿಯಿಂದ ಹೊರಗೆಳೆದು ಲಾಠಿಯಿಂದ ಹಲ್ಲೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ ಮತ್ತು ಖಂಡನೀಯ. ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಈ ರೀತಿ ಕಾನೂನು ಕೈಗೆತ್ತಿಕೊಳ್ಳುವುದು ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತದೆ.








