ಬೆಂಗಳೂರು : ಕಾಡಾನೆ ದಾಳಿಗೆ ರೈತ ಒಬ್ಬರು ಬಲಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಚೀಲಂದವಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ರೈತ ಕರಿಗುಂಡ (55) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಚೀಲಂದವಾಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಸಂಗಮ ಅರಣ್ಯ ವಲಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ವ್ಯಕ್ತಿ ದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಘಟನಾ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.








