ಹುಬ್ಬಳ್ಳಿ : ರಾಜ್ಯದಲ್ಲಿ 255 ವೈದ್ಯರ ನೇಮಕಾತಿಗೆ ಅನುಮೋದನೆ ಸಿಕ್ಕಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಕ್ ಔಷಧಿ ಬಳಿಗೆ ಮುಂದುವರಿಯಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಔಷಧಿಗಳು ಮಾತ್ರ ಇರಬೇಕು. ಆದರೆ ಸರ್ಕಾರದ ಕ್ರಮ ಪ್ರಶ್ನೆಸಿ ಕೆಲವರು ಕೋರ್ಟಿಗೆ ಹೋಗಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನ ಗುಂಡುರಾವ್ ಹೇಳಿಕೆ ನೀಡಿದರು.
ಕೋವಿಡ್ ಸಮಯದಲ್ಲಿ ಹಗರಣದ ಬಗ್ಗೆ ಪುನಹ ಸಮಿತಿ ವರದಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಕುನಹ ಸಮಿತಿ ವರದಿ ಆಧಾರದಲ್ಲಿ ತನಿಖೆ ನಡೆಯುತ್ತಿದೆ ಕೊರೋನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ದುರುಪಯೋಗವಾಗಿದೆ ಸಾಕಷ್ಟು ದುರ್ಬಳಕೆ ಆಗಿರಬಹುದು ಕಣ್ಣಿಗೆ ಕಾಣುತ್ತಿದೆ. ಆದರೆ ಸಾಕ್ಷಿ ಆಧಾರದಲ್ಲಿ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.








