ಜೆರುಸಲೆಮ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯು ನಾಟಕೀಯ ತಿರುವು ಪಡೆದುಕೊಂಡಿದೆ. ಭದ್ರತಾ ಕಾರಣಗಳನ್ನು ನೀಡಿ ನ್ಯಾಯಾಲಯವು ನೆತನ್ಯಾಹು ಅವರ ಸಾಕ್ಷ್ಯ ನುಡಿಯುವ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ವಿಚಾರಣೆ ಹಠಾತ್ ಸ್ಥಗಿತಗೊಳ್ಳಲು ಪ್ರಮುಖ ಕಾರಣವೆಂದರೆ ಇರಾನ್ ಪ್ರೇರಿತ ಹತ್ಯೆಯ ಸಂಚು (Assassination Threat).ಇಸ್ರೇಲ್ನ ಗುಪ್ತಚರ ಸಂಸ್ಥೆಗಳು ನೀಡಿದ ವರದಿಯ ಪ್ರಕಾರ, ನೆತನ್ಯಾಹು ಅವರು ನ್ಯಾಯಾಲಯಕ್ಕೆ ಹಾಜರಾಗುವ ಸಮಯದಲ್ಲಿ ಅವರ ಮೇಲೆ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆಸಲು ಶತ್ರು ರಾಷ್ಟ್ರಗಳು ಹೊಂಚು ಹಾಕುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಜೆರುಸಲೆಮ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಬಂಕರ್ಗಳ ಕೊರತೆಯಿದೆ. ಸುದೀರ್ಘ ವಿಚಾರಣೆ ನಡೆಯುವ ಸಮಯದಲ್ಲಿ ಇಂತಹ ದಾಳಿಗಳು ನಡೆದರೆ ಪ್ರಧಾನಿಯವರ ಪ್ರಾಣಕ್ಕೆ ಅಪಾಯವಿರುವುದರಿಂದ ವಿಚಾರಣೆಯನ್ನು ತಡೆಹಿಡಿಯಲಾಗಿದೆ.
ಪ್ರಾದೇಶಿಕವಾಗಿ ಇರಾನ್ ಮತ್ತು ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವ ಕಾರಣ, ಪ್ರಧಾನಿಯವರು ಸಾರ್ವಜನಿಕವಾಗಿ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ಇರುವುದು ಸುರಕ್ಷಿತವಲ್ಲ ಎಂದು ಭದ್ರತಾ ಪಡೆಗಳು ಎಚ್ಚರಿಸಿವೆ.








