ಉತ್ತರಕನ್ನಡ : ಬೆಂಗಳೂರು, ಚಿಕ್ಕಮಂಗಳೂರು, ಹಾಸನ, ಮೈಸೂರು, ಮಂಡ್ಯ ಸೇರಿದಂತೆ ಈ ಭಾಗಗಳಲ್ಲಿ ಹೆಚ್ಚು ಚಿರತೆ, ಹುಲಿಗಳು ಪ್ರತ್ಯಕ್ಷ ಆಗಿರುವ ಪ್ರಕರಣಗಳು ನಡೆದಿದ್ದವು. ಆದರೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕುಡ್ಲೆ ಕಡಲತೀರದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷ ಆಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ ಪ್ರವಾಸಿಗರು ಓಡಾಡುವ ಸಮುದ್ರ ತೀರದ ರಸ್ತೆಯ ಬಳಿ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಚಿರತೆ ಓಡಾಟ ಕಂಡು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಹಳದಿ ಈ ಒಂದು ಕಡಲೇ ತೀರಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ ಚಿರತೆ ಓಡಾಡಿರುವ ದೃಶ್ಯ ಕಂಡು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.








