ಹಾವೇರಿ : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸರ್ಕಾರವೇ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ನಿಯಂತ್ರಿಸಲಿದ್ದು, ಟ್ಯಾಬ್ ಮೂಲಕ ರೋಗಿಯ ಸ್ಥಿತಿಗತಿ ವೀಕ್ಷಿಸುವ ನೂತನ ವ್ಯವಸ್ಥೆ ಜಾರಿಯಾಗಲಿದೆಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ 1300 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು. ಕರ್ನಾಟಕದಲ್ಲಿ ಇನ್ನು ಮುಂದೆ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಖಾಸಗಿಯವರಿಗೆ ನೀಡದೇ ಸರ್ಕಾರವೇ ಕಂಟ್ರೋಲ್ ಮಾಡುತ್ತದೆ. ಆ್ಯಂಬುಲೆನ್ಸಗಳಿಗೆ ಟ್ಯಾಬ್ ಅಳವಡಿಕೆ ಮಾಡುತ್ತೇವೆ. ಆಗ ಸಿಬ್ಬಂದಿ ರೋಗಿಯನ್ನು ಟ್ಯಾಬ್ ಮೂಲಕ ತೋರಿಸಿ ವೈದ್ಯರ ಬಳಿ ಮಾತಾಡಬಹುದು. ರೋಗಿಯ ಸ್ಥಿತಿಗತಿ ವೀಕ್ಷಿಸಬಹುದು ಎಂದರು.
ಅಲ್ಲದೇ ರೆಡಿಯೋಲಜಿ ತಜ್ಞರ ಕೊರತೆ ಮೊದಲಿನಿಂದಲೂ ಇದೆ. ಅವರಿಗೆ ಹೆಚ್ಚಿನ ಬೇಡಿಕೆ ಇದ್ದು, ಟೆಲಿ ರೆಡಿಯಾಲಾಜಿ ಮೂಲಕ ಈ ಕೊರತೆ ನೀಗಿಸುತ್ತೇವೆ. ರೋಗಿ ಎಷ್ಟು ಹೊತ್ತು ಆ್ಯಂಬುಲೆನ್ಸ್ನಲ್ಲಿ ಇದ್ದ, ಆಸ್ಪತ್ರೆಗೆ ಕರೆತಂದ ಸಮಯ, ತುರ್ತು ಚಿಕಿತ್ಸೆಯ ಎಲ್ಲಾ ವಿವರ ಸಿಗಲಿದೆ. ದೇಶದಲ್ಲೇ ಮೊದಲ ಬಾರಿಗೆ ಈ ವ್ಯವಸ್ಥೆ ಜಾರಿ ಮಾಡುತ್ತಿದ್ದೇವೆ. ಮುಂದಿನ








