ಬೆಂಗಳೂರು : ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಆಪ್ರಾಪ್ತ ಮಕ್ಕಳಿಗೆ ಮನಮದಂತೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಒಂದು ಘಟನೆ ನಡೆದಿದ್ದು ಕಾಂಗ್ರೆಸ್ ಮುಖಂಡ ಆನಂದ ನಾಯ್ಡು ವಿರುದ್ಧ ಇದೀಗ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆನಂದ ನಾಯ್ಡು ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದು, ಮಕ್ಕಳಿಗೆ ಕಚ್ಚಿ ರಾಡ್ ನಿಂದ ಭೀಕರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮಕ್ಕಳ ಕಾಲು, ಮೈ ಹಾಗೂ ಕೈ ಮೇಲೆ ಆನಂದ ನಾಯ್ಡು ಹಲ್ಲೆ ಮಾಡಿದ್ದಾನೆ. ಅಲ್ಲದೇ ಕಚ್ಚಿ ಗಾಯಗೊಳಿಸಿದ್ದಾನೆ ಎಂದು ಆತನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದ್ದು, ಇದೀಗ ಆನಂದ ನಾಯ್ಡು ವಿರುದ್ಧ ದೂರು ದಾಖಲಾಗಿದೆ.
ಮಹಿಳೆಯ ಜೊತೆಗೆ ಆನಂದ ನಾಯ್ಡು ಅಕ್ರಮ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೂಡ ಇದ್ದು, ಆಕ್ರಮ ಸಂಬಂಧವನ್ನು ಮಹಿಳೆಯ ಪತಿ ಆತನಿಗೆ ಪ್ರಶ್ನೆ ಮಾಡಿದ್ದಾರೆ. ಆಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಮೇಲೆ ಆನಂದ ಹಲ್ಲೆ ಮಾಡಿದ್ದಾನೆ. ಪತಿ ಇಲ್ಲದ ವೇಳೆ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ. ಇದೀಗ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಆನಂದ ನಾಯ್ಡು ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.








