ಬೆಂಗಳೂರು : ಬೆಂಗಳೂರಿನಲ್ಲಿ ಪ್ರೀತಿ ವಿಚಾರಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ರಾಜೇಶ್ (35) ಎನ್ನುವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರಿನ ಕುದುರು ರಸ್ತೆಯ ಮಲ್ಲಿಕುಂಟೆಯ ಮನೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಬೆಂಗಳೂರಿನ ಬಾಗಲೂರು ಸಾತನೂರು ನಿವಾಸಿಯಾಗಿರುವ ರಾಜೇಶ್, ಪ್ರೀತಿಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ.
ಸಂಬಂಧಿಕರ ಬಳಿ ಕೆಲಸ ಮಾಡಿಕೊಂಡಿದ್ದ ಮೃತ ರಾಜೇಶ್ ಸ್ಟಿಲ್ ಅಂಗಡಿ, ತೋಟ ನೋಡಿಕೊಂಡಿದ್ದ ಈ ವೇಳೆ ರಾಜೇಶ್ ಯುವತಿ ಒಬ್ಬಳನ್ನು ಪ್ರೀತಿಸುತ್ತಿದ್ದ. ಇಬ್ಬರ ನಡುವೆ ಆಗಾಗ ಗಲಾಟೆ ಆಗುತ್ತಿದ್ದರ ಆರೋಪ ಹೇಳಿ ಬಂದಿದ್ದು, ಅಲ್ಲದೆ ಈ ಕುರಿತು ರಾಜೇಶ್ ಡೆತ್ ನೋಟ್ ಬರೆದಿಟ್ಟಿದ್ದ. ಅದರಲ್ಲಿ ಯುವತಿಯ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದು ಕುದುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








