ಹಾವೇರಿ : ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಮಹಾ ಎಡವಟ್ಟು ಮಾಡಿದ್ದು, ಹರ್ನಿಯ ಆಪರೇಷನ್ ವೇಳೆ ಬಾಲಕನೊಬ್ಬ ಕೋಮಾಗೆ ಹೋಗಿದ್ದಾನೆ. ಹಾಗಾಗಿ ಇದೀಗ ಬಾಲಕನ ಪೋಷಕರು ಆಸ್ಪತ್ರೆ ಹಾಗು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಮಾಡುತ್ತಿದ್ದಾರೆ. ಹರ್ನಿಯ ಆಪರೇಷನ್ ಮಾಡಿದ ವೇಳೆ 7 ವರ್ಷದ ಚಾಂದ್ ಪೀರ್ ಸಾಬ್ ದೊಡಮನಿ ಎಂದು ತಿಳಿದುಬಂದಿದೆ.
ವೈದ್ಯರು, ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೋಮಾಗೆ ಹೋದ ಬಾಲಕನನ್ನ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಬಾಲಕನ ಚಿಕಿತ್ಸೆಗೆ ಲಕ್ಷಾಂತರ ರೂ.ಖರ್ಚು ಮಾಡಿರುವ ಕುಟುಂಬ ಸದಸ್ಯರು ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಚಾಂದ್ ಪೀರ್ ಹರ್ನಿಯ ಆಪರೇಷನ್ ಮಾಡಿದ ವೈದ್ಯರ ವಿರುದ್ಧ ದೂರು ದಾಖಲಾಗಬೇಕು ತನಿಖೆ ನಡೆಸಿ ಬಾಲಕನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸೋದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.








