ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ರಾಜ್ಯ ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗು ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ.
ಇದರ ಮಧ್ಯ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದು, 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ.








