ಯಾದಗಿರಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದ ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಮತ್ತು ಮನಕಲಕುವಂತದ್ದು. ಹವಾಮಾನ ವೈಪರೀತ್ಯ ಹಾಗೂ ಸಿಡಿಲಿನ ಹೊಡೆತಕ್ಕೆ ಸಿಲುಕಿ 60 ಕುರಿಗಳು ಏಕಾಏಕಿ ಸಾವನ್ನಪ್ಪಿರುವುದು ಆ ಕುರಿಗಾಹಿ ಕುಟುಂಬಗಳಿಗೆ ತುಂಬಲಾರದ ಆರ್ಥಿಕ ನಷ್ಟವನ್ನುಂಟು ಮಾಡಿದೆ.
ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








