ನವದೆಹಲಿ: ದೇಶದಲ್ಲಿ ಈ ಬಾರಿ ಅಸಹಜ ರೀತಿಯಲ್ಲಿ ಬಿಸಿಲು ಹೆಚ್ಚಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪರಿಸ್ಥಿತಿಯನ್ನು ಎದುರಿಸಲು ‘ತುರ್ತು ಕಾರ್ಯಯೋಜನೆ’ಯನ್ನು (Emergency Plan) ಜಾರಿಗೊಳಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಮಹತ್ವದ ಪತ್ರ ಬರೆದಿದೆ.
ಬೇಸಿಗೆಯ ತಾಪಮಾನವು ಮಿತಿ ಮೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ:
ಆರೋಗ್ಯ ಮೂಲಸೌಕರ್ಯ ಸಿದ್ಧತೆ: ಬಿಸಿಲಿನ ತಾಪದಿಂದ ಉಂಟಾಗುವ ಅನಾರೋಗ್ಯ (Heat-related illnesses) ಎದುರಿಸಲು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳು ಮತ್ತು ಅಗತ್ಯ ಔಷಧಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.ಜನರು ಮಧ್ಯಾಹ್ನದ ವೇಳೆಯಲ್ಲಿ ಮನೆಯಿಂದ ಹೊರಬರದಂತೆ ಮತ್ತು ಹೈಡ್ರೇಟೆಡ್ ಆಗಿರಲು ವ್ಯಾಪಕ ಪ್ರಚಾರ ಕೈಗೊಳ್ಳಲು ತಿಳಿಸಲಾಗಿದೆ.ಆಸ್ಪತ್ರೆಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಬ್ಯಾಕಪ್ ವ್ಯವಸ್ಥೆ ಹೊಂದಿರಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.








