ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿಯನ್ನು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಮೂರು ತಿಂಗಳು ಕಳೆದರೂ ಕೂಡ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ಪತ್ತೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಇದೀಗ ಈ ಒಂದು ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೇಸ್ ಸಂಬಂಧ ಹೈ ಕೋರ್ಟ್ ನಲ್ಲಿ ಹೇಬಿಎಸ್ ಕಾರ್ಪಸ್ ಪೋಷಕರು ಹಾಕಿದ್ದರು. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ತೇಜಸ್ವಿನಿ ಹಾಗೂ ತನಿಷ್ಕ ಜನವರಿ 31ರಂದು ನಾಪತ್ತೆಯಾಗಿದ್ದರು. ಅವರ ಓಡಾಟದ ಸಿಸಿಟಿವಿ ದೃಶ್ಯ ಕೂಡ ಲಭ್ಯವಾಗಿತ್ತು. ಆಧಾರ್ ಕಾರ್ಡ್ ನೊಂದಿಗೆ ಇಬ್ಬರು ವಿದ್ಯಾರ್ಥಿನಿಯರು ಮನೆ ಬಿಟ್ಟು ಹೋಗಿದ್ದಾರೆ.
ಆದರೆ ಇಬ್ಬರು ಎಲ್ಲಿ ಹೋಗಿದ್ದಾರೆ ಎನ್ನುವುದು ಸಣ್ಣ ಸುಳಿವು ಕೂಡ ಪೊಲೀಸರಿಗೆ ಇದುವರೆಗೂ ಸಿಕ್ಕಿಲ್ಲ. ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಹಾಗಾಗಿ ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿ ಆದೇಶ ಕೊಡಲಾಗಿದೆ. ಸಿಐಡಿ ಗೆ ಪ್ರಕರಣದ ಸಂಪೂರ್ಣ ರಿಪೋರ್ಟನ್ನು ವಿದ್ಯಾರಣ್ಯಪುರ ಠಾಣಾ ಪೊಲೀಸರು ಹಸ್ತಾಂತರ ಮಾಡಿದ್ದಾರೆ.








