ಉಡುಪಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಉಡುಪಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಗೆ ಹಿಂದಿನಿಂದ ಪ್ರವಾಸಿಗರಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿ ಈ ಒಂದು ಹಬ್ಬದ ಸಂಭವಿಸಿದ್ದು ಪೆಟ್ರೋಲ್ ಟ್ಯಾಂಕರ್ ಗೆ ಪ್ರವಾಸಿಗರಿದ್ದ ಬಸ್ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








