ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣಗಳ (Hate Speech) ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದ್ವೇಷ ಭಾಷಣ ಮಾಡುವವರನ್ನು ಶಿಕ್ಷಿಸಲು ದೇಶದಲ್ಲಿ ಈಗಾಗಲೇ ಸಮರ್ಥವಾದ ಕಾನೂನುಗಳಿವೆ, ಆದರೆ ಆ ಕಾನೂನುಗಳನ್ನು ಸರಿಯಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಸಾಕಷ್ಟು ದಾರಿಗಳಿವೆ. ಹೊಸ ಕಾನೂನಿನ ಅಗತ್ಯಕ್ಕಿಂತ ಹೆಚ್ಚಾಗಿ, ಇರುವ ನಿಯಮಗಳ ಸಮರ್ಪಕ ಬಳಕೆಯಾಗಬೇಕಿದೆ.ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮತ್ತು ಸ್ಥಳೀಯ ಆಡಳಿತಗಳು ತೋರುತ್ತಿರುವ ವಿಳಂಬ ಅಥವಾ ನಿರ್ಲಕ್ಷ್ಯವೇ ಸಮಸ್ಯೆಯ ಮೂಲ ಎಂದು ನ್ಯಾಯಪೀಠ ಹೇಳಿದೆ.
ಕಾನೂನು ಪುಸ್ತಕದಲ್ಲಿ ಮಾತ್ರ ಇರಬಾರದು, ಅದು ಕಾರ್ಯರೂಪಕ್ಕೆ ಬರಬೇಕು. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಿದರೆ ದ್ವೇಷ ಭಾಷಣಗಳಿಗೆ ಬ್ರೇಕ್ ಹಾಕಬಹುದು ಎಂದು ಕೋರ್ಟ್ ಒತ್ತಿ ಹೇಳಿದೆ.







