ಬೆಂಗಳೂರು: ನಗರದಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ನಗರದಲ್ಲಿ ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು ನಗರದಾಧ್ಯಂತ ವರುಣ ಆರ್ಭಟಿಸಿದ್ದಾನೆ. ಇಂದು ಸುರಿದಂತ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳುಗಳನ್ನು ಭೇಟಿಯಾದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ವಿಚಾರಿಸಿದರು. ಅಲ್ಲದೇ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಜೊತೆಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ತಿಳಿಸಿದರು. ಅಲ್ಲದೇ ಮೃತ 7 ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು.
ಮತ್ತೊಂದೆಡೆ ಬೆಂಗಳೂರಿನ ಯಾರಬ್ ನಗರದಲ್ಲಿ ಬೈಕ್ ಪಾರ್ಕ್ ಮಾಡುವಾಗ ದುರಂತವೊಂದು ಸಂಭವಿಸಿದೆ. ವಿದ್ಯುತ್ ಶಾಕ್ ನಿಂದಾಗಿ ಸೈಯದ್ ಸೂಫಿಯಾನ್ ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಇದೀಗ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.








