ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಮೇಲ್ಚಾವಣಿ ಸಿಮೆಂಟ್ ಇಟ್ಟಿಗೆ ಬಿದ್ದು ಮಂಜುನಾಥ್ ಸಾವನಪ್ಪಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಈ ಒಂದು ದುರಂತ ಸಂಭವಿಸಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮಂಜುನಾಥ್ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ ಚಾಮರಾಜ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ ರಕ್ಕಸ ಮಳೆಗೆ ಇದುವರೆಗೂ 9 ಜನ ಸಾಾವನಪ್ಪಿದ್ದು ಇದೀಗ ಮಂಜುನಾಥ್ ಸಾವಿನಿಂದ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಇನ್ನು ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಬಸವನಗುಡಿ ರಾಮಕೃಷ್ಣ ಮಠದ ಸಮೀಪ ಈ ಒಂದು ಘಟನೆ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿರುವಾಗ ಮರದ ಕೊಂಬೆ ಮುರಿದುಬಿದ್ದು ಈ ಒಂದು ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ರಾಕೇಶ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಸಣ್ಣ ಪುಟ್ಟ ಗಾಯಗಳೊಂದಿಗೆ ಮಂಜುನಾಥ ಎನ್ನುವವರು ಪಾರಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








