Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!
KARNATAKA

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

By kannadanewsnow0530/04/2026 3:49 PM

ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM1 Min Read

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM1 Min Read

ರಾಜ್ಯದಲ್ಲಿ ‘ಉಪ ನೋಂದಣಾಧಿಕಾರಿ’ಗಳನ್ನು ‘ಕೌನ್ಸೆಲಿಂಗ್’ ಮೂಲಕ ವರ್ಗಾವಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ

30/04/2026 3:39 PM2 Mins Read
Recent News

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

30/04/2026 3:50 PM

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM

ರಾಜ್ಯದಲ್ಲಿ ‘ಉಪ ನೋಂದಣಾಧಿಕಾರಿ’ಗಳನ್ನು ‘ಕೌನ್ಸೆಲಿಂಗ್’ ಮೂಲಕ ವರ್ಗಾವಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ

30/04/2026 3:39 PM
State News
KARNATAKA

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡ, ಕಾಂಪೌಂಡ್ ಪರಿಶೀಲಿಸಿ ವರದಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

By kannadanewsnow0930/04/2026 3:50 PM KARNATAKA 1 Min Read

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ…

ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!

30/04/2026 3:49 PM

ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವಿರೋಧ ಆಯ್ಕೆ

30/04/2026 3:43 PM

ರಾಜ್ಯದಲ್ಲಿ ‘ಉಪ ನೋಂದಣಾಧಿಕಾರಿ’ಗಳನ್ನು ‘ಕೌನ್ಸೆಲಿಂಗ್’ ಮೂಲಕ ವರ್ಗಾವಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ

30/04/2026 3:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.