ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನಸಾಮಾನ್ಯದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಭೆ ನಡೆಯಿತು.
ಸಭೆಯಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರನ್ನು ಸಭೆಯಲ್ಲಿ ತರಾಟೆ ತೆಗೆದುಕೊಂಡರು. ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಕೊಟ್ಟಿದ್ದಾರೆ. ಕಾರ್ಯಪಾಲಕ ಇಂಜಿನಿಯರ್ ನನ್ನು ಅಮಾನತು ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ಯಾಕೆ ನೀವು ಯಾಕೆ ಅದನ್ನು ನೋಡಿಕೊಳ್ಳಲಿಲ್ಲ ಅದೇ ಈ ಒಂದು ದುರಂತಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗರಾಂ ಆಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.








