ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌಲಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನಸಾಮಾನ್ಯದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಸಭೆಯಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರನ್ನು ಸಭೆಯಲ್ಲಿ ತರಾಟೆ ತೆಗೆದುಕೊಂಡರು ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಕೊಟ್ಟಿದ್ದಾರೆ.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ಯಾಕೆ ನೀವು ಯಾಕೆ ಅದನ್ನು ನೋಡಿಕೊಳ್ಳಲಿಲ್ಲ ಅದೇ ಈ ಒಂದು ದುರಂತಕ್ಕೆ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗರಾಂ ಆಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನ ಸಾವನಪ್ಪಿದ್ದರು. ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ಗೆ ಆದೇಶ
ಸಭೆಯ ಉದ್ದಕ್ಕೂ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಬೌರಿಂಗ್ ಆಸ್ಪತ್ರೆಯ ಮುಖ್ಯಸ್ಥರಿಗೆ ತಕ್ಷಣವೇ ಕಾರಣ ಕೇಳಿ ನೋಟಿಸ್ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶಿಸಿದರು. ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಕ್ಷಮಾರ್ಹವಲ್ಲ ಎಂದು ತಿಳಿಸಿದ ಅವರು, ಆಸ್ಪತ್ರೆ ಆವರಣದ ರಕ್ಷಣಾ ಕ್ರಮಗಳ ಬಗ್ಗೆ ಉತ್ತರದಾಯಿತ್ವ ಇರಬೇಕು ಎಂದು ತಾಕೀತು ಮಾಡಿದರು.
ಕಾರ್ಯಪಾಲಕ ಇಂಜಿನಿಯರ್ ಅಮಾನತು
ಘಟನೆಗೆ ಸಂಬಂಧಿಸಿದಂತೆ ತಾಂತ್ರಿಕ ವೈಫಲ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ, ಬೌರಿಂಗ್ ಆಸ್ಪತ್ರೆ ವ್ಯಾಪ್ತಿಯ ಕಾರ್ಯಪಾಲಕ ಇಂಜಿನಿಯರ್ (Executive Engineer) ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಕಾಮಗಾರಿಗಳ ಗುಣಮಟ್ಟ ಮತ್ತು ಹಳೆಯ ಕಟ್ಟಡಗಳ ಸದೃಢತೆಯನ್ನು ಪರಿಶೀಲಿಸದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಈ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಮುಂಜಾಗ್ರತಾ ಕ್ರಮಕ್ಕೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರಿನಲ್ಲಿ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಹಳೆಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಿ ವರದಿ ನೀಡುವಂತೆ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು.








