ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ ಒಂದು ನಡೆದಿದ್ದು, ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಯುವತಿಯನ್ನು ಮೇಘಾಲಯದ ಅಗತ ಬೈತಿಯಂಅಂಗಂ (34) ಎಂದು ತಿಳಿದು ಬಂದಿದೆ.
ಫ್ಯಾನ್ ಗೆ ನೇಣು ಬಿಗಿದುಕೊಂಡು ಆಗತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದ ಬುಧವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಯುವತಿ ಲಿವಿಂಗ್ ರಿಲೇಶನ್ ಶಿಪ್ ನಲ್ಲಿ ಇದ್ದಳು. ಈಕೆ 26 ವರ್ಷದ ನವಾಜ್ ಶರೀಫ್ ಜೊತೆಗೆ ಲಿವಿಂಗ್ ರಿಲೇಶನ್ಶಿಪ್ ನಲ್ಲಿ ಇದ್ದಳು. ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಕಳೆದ ಬುಧವಾರ ಕೂಡ ಗಲಾಟೆ ನಡೆದ ಸಂದರ್ಭದಲ್ಲಿ ಯುವಕ ನವಾಜ್ ಶರೀಫ್ ಹೊರಗಡೆ ಹೋಗಿದ್ದಾನೆ ಈ ವೇಳೆ ಈಕೆ ನೀಡುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆ ಘಟನೆ ಬಂದು ಗುಡಿ ಆರ್ ಪ್ರಕರಣ ದಾಖಲಿಸಿದ್ದು, ಆಕೆ ಮರಣೋತ್ತರ ಪರೀಕ್ಷೆ ಮುಗಿಸಿ , ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ. ಯುವತಿಯ ಕುಟುಂಬಸ್ಥರು ಇದು ಅನುಮಾನ ಸಾವ ಎಂದು ದೂರು ಕೊಟ್ಟ ನೆಲೆಯಲ್ಲಿ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.








