Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗ ವಾರ್ತೆ : `CRPF’ ನಲ್ಲಿ 9,195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CRPF Recruitment 2026

01/05/2026 12:32 PM

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

01/05/2026 12:15 PM

ಸಂಬಂಧಿತ ಡಿಗ್ರಿ ಇಲ್ಲದೇ ವೃತ್ತಿ ಬದಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/05/2026 12:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್
KARNATAKA

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

By kannadanewsnow0501/05/2026 12:15 PM

ಬೆಂಗಳೂರು : ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ(Air Hostess) ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ.

ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಪರಿಚಯಸ್ಥರಾಗಿದ್ದು, ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಿತ್ತು. ಆದರೆ ಇತ್ತೀಚೆಗೆ ಆರೋಪಿ ಚಂದ್ರಶೇಖರ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸಲು ಆರಂಭಿಸಿದ್ದ ಎನ್ನಲಾಗಿದೆ. ಯುವಕನ ವರ್ತನೆಯಿಂದ ಬೇಸತ್ತಿದ್ದ ಯುವತಿ ಆತನನ್ನು ಸಂಪೂರ್ಣವಾಗಿ ದೂರ ಮಾಡಲು ಮುಂದಾಗಿದ್ದಳು.

ನಡೆದಿದ್ದೇನು?: ನಗರದ ಖಾಸಗಿ ಏವಿಯೇಷನ್ ಅಕಾಡೆಮಿಯೊಂದರಲ್ಲಿ ಗಗನಸಖಿ ತರಬೇತಿ ಪಡೆಯುತ್ತಿದ್ದ ಸಂತ್ರಸ್ತೆ, ತನ್ನ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದ ರಸ್ತೆಯಲ್ಲಿ ಯುವತಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಆರೋಪಿ ಚಂದ್ರಶೇಖರ್, ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲೇ ಅಡ್ಡಗಟ್ಟಿದ್ದಾನೆ. ಬಳಿಕ ಆಕೆಯ ಮೇಲೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ.

ಯುವತಿಯ ಸಮಯಪ್ರಜ್ಞೆ: ಆರೋಪಿಯ ಅನಿರೀಕ್ಷಿತ ದಾಳಿಯಿಂದ ಕಂಗಾಲಾಗದ ಯುವತಿ, ತಕ್ಷಣವೇ ಕಿರುಚಿಕೊಂಡು ಸ್ಥಳೀಯರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಯುವತಿಯ ಪ್ರತಿರೋಧ ಕಂಡು ಗಾಬರಿಯಾದ ಆರೋಪಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸಂತ್ರಸ್ತೆ ಧೈರ್ಯಗೆಡದೆ ಬಾಗಲೂರು ಪೊಲೀಸ್ ಠಾಣೆಗೆ ತೆರಳಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ದೂರು ದಾಖಲಿಸಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೂಡಲೇ ತನಿಖೆ ಆರಂಭಿಸಿದರು.

ಆರೋಪಿ ಬಂಧನ: ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರು ಮತ್ತು ಸ್ಥಳೀಯ ಮಾಹಿತಿದಾರರ ನೆರವಿನಿಂದ ಆರೋಪಿ ಚಂದ್ರಶೇಖರ್‌ನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಬರುವ ಅನ್ಯರಾಜ್ಯದ ಯುವತಿಯರ ಸುರಕ್ಷತೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ಆತಂಕ ಮೂಡಿಸಿದೆ.

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ : ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು!

01/05/2026 11:54 AM1 Min Read

20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ಬೆಂಗಳೂರಲ್ಲಿ ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

01/05/2026 11:40 AM1 Min Read

BREAKING : ಆಟೋ ಚಾಲಕರಿಗೆ ಬಿಗ್ ಶಾಕ್ : ಆಟೋ ಗ್ಯಾಸ್ ದರ 5.73 ರೂ.ಏರಿಕೆ.!

01/05/2026 11:21 AM1 Min Read
Recent News

ಉದ್ಯೋಗ ವಾರ್ತೆ : `CRPF’ ನಲ್ಲಿ 9,195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CRPF Recruitment 2026

01/05/2026 12:32 PM

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

01/05/2026 12:15 PM

ಸಂಬಂಧಿತ ಡಿಗ್ರಿ ಇಲ್ಲದೇ ವೃತ್ತಿ ಬದಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/05/2026 12:05 PM

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ : ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು!

01/05/2026 11:54 AM
State News
KARNATAKA

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

By kannadanewsnow0501/05/2026 12:15 PM KARNATAKA 1 Min Read

ಬೆಂಗಳೂರು : ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ(Air Hostess) ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು…

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ : ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು!

01/05/2026 11:54 AM

20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ಬೆಂಗಳೂರಲ್ಲಿ ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

01/05/2026 11:40 AM

BREAKING : ಆಟೋ ಚಾಲಕರಿಗೆ ಬಿಗ್ ಶಾಕ್ : ಆಟೋ ಗ್ಯಾಸ್ ದರ 5.73 ರೂ.ಏರಿಕೆ.!

01/05/2026 11:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.