ಬೆಂಗಳೂರು : ಬೆಂಗಳೂರಲ್ಲಿ ಬನ್ನೇರುಘಟ್ಟದ ಸಮೀಪ ಬಿಲ್ವಾರದ ಹಳ್ಳಿ ಬಳಿ ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ವೃದ್ದೇಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿ ದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಿಲ್ಬಾರದ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬೇರೆ ಕಡೆಗೆ ಕೊಲೆ ಮಾಡಿ ಇಲ್ಲಿ ತಂದು ಬೆಂಕಿ ಹಚ್ಚಿರುವುದು ಪತ್ತೆಯಾಗಿದ್ದು, ಆಸ್ತಿ ವಿವಾದಕ್ಕೆ ವೃದ್ಧೆಯನ್ನು ಕೊಲೆ ಮಾಡಿ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ. ಬೆಳಗ್ಗೆ 9:30 ಸುಮಾರಿಗೆ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬನ್ನೇರುಘಟ್ಟ ಪೊಲೀಸರು ಇದೀಗ ಶೋಧ ಕಾರ್ಯ ನಡೆಸುತ್ತಿದ್ದಾರೆ.








