ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಮಾರಕಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಬಡಾವಣೆಯಲ್ಲಿ ಈ ಒಂದು ಭೀಕರ ಕೋಲೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಮೋದ್ (46) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಪ್ರಮೋದನ್ನು ಕೊಲೆ ಮಾಡಿದ್ದು, ಮಹಿಳೆಯ ಜೊತೆ ಆಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








