ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಕಾಂಗ್ರೆಸ್ ನ ಸಮರ್ಥ್ ಶಾಮನೂರು ಹಿನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಶ್ರೀನಿವಾಸ ದಾಸ ಕರಿಯಪ್ಪ 577 ಮತಗಳ ಮುನ್ನಡೆ ಸಾಧಿಸಿದ್ದಾರೆ.








