Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಪ್ರಚಾರ ವೈಖರಿ ಮಹತ್ವದ ಪಾತ್ರ ವಹಿಸಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.

ಜಮೀರ್ ಪ್ರಚಾರದ 24 ಕ್ಷೇತ್ರಗಳಲ್ಲಿ ಯುಡಿಎಫ್‌ಗೆ ಜಯ

ಎಐಸಿಸಿ ಸೂಚನೆಯಂತೆ ಕೇರಳದಲ್ಲಿ ಪ್ರಚಾರದ ಹೊಣೆ ಹೊತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಒಟ್ಟು 33 ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಿದ್ದರು. ಈ ಪೈಕಿ 24 ಕ್ಷೇತ್ರಗಳಲ್ಲಿ ಯುಡಿಎಫ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಸಚಿವರು ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಶೇ. 70ಕ್ಕೂ ಹೆಚ್ಚು ಯಶಸ್ಸು ಲಭಿಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.

ಎಐಸಿಸಿ ನೀಡಿದ್ದ ಪ್ರಮುಖ ಜಿಲ್ಲೆಗಳ ಜವಾಬ್ದಾರಿ

ಕೇರಳದ ಪ್ರಮುಖ ಜಿಲ್ಲೆಗಳಾದ ಕ್ಯಾಲಿಕಟ್, ಕಣ್ಣೂರು, ವಯನಾಡ್, ಕಾಸರಗೋಡು, ಅಲೆಪ್ಪಿ, ಪಾಲಕ್ಕಾಡ್, ಮಲಪ್ಪುರಂ ಮತ್ತು ಕೊಚ್ಚಿನ್ ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸುವ ಮತ್ತು ಪ್ರಚಾರ ನಡೆಸುವ ಜವಾಬ್ದಾರಿಯನ್ನು ಎಐಸಿಸಿ ಜಮೀರ್ ಅವರಿಗೆ ನೀಡಿತ್ತು. ಈ ಜಿಲ್ಲೆಗಳ ಬಹುತೇಕ ಕ್ಷೇತ್ರಗಳಲ್ಲಿ ಯುಡಿಎಫ್ ಪರ ಅಲೆ ಸೃಷ್ಟಿಸುವಲ್ಲಿ ಸಚಿವರು ಯಶಸ್ವಿಯಾಗಿದ್ದಾರೆ.

ಮತದಾರರ ಮೇಲೆ ಪ್ರಭಾವ ಬೀರಿದ ಕರ್ನಾಟಕದ ಸಚಿವರು

ಕೇರಳದ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಸೆಳೆಯುವಲ್ಲಿ ಜಮೀರ್ ಅಹ್ಮದ್ ಅವರ ಪ್ರಚಾರ ಶೈಲಿ ಮತ್ತು ಭಾಷಣಗಳು ಪ್ರಭಾವ ಬೀರಿದ್ದವು. ಸತತವಾಗಿ 33 ಕ್ಷೇತ್ರಗಳಲ್ಲಿ ಸಂಚರಿಸಿ ಸಾರ್ವಜನಿಕ ಸಭೆ ಹಾಗೂ ರೋಡ್ ಶೋಗಳನ್ನು ನಡೆಸಿದ್ದ ಅವರ ಶ್ರಮಕ್ಕೆ ಈಗ ಫಲಿತಾಂಶದ ರೂಪದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ.

ಈ ಗೆಲುವು ಕೇರಳ ರಾಜಕಾರಣದಲ್ಲಿ ಯುಡಿಎಫ್ ಮೈತ್ರಿಕೂಟಕ್ಕೆ ಹೊಸ ಚೈತನ್ಯ ನೀಡಿದ್ದು, ಕರ್ನಾಟಕದ ನಾಯಕರ ಪ್ರಭಾವ ನೆರೆಯ ರಾಜ್ಯದ ಮೇಲೂ ಬಲವಾಗಿ ಬೀರಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ.

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.