ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ-ಮಂಡಳಿಗಳ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಅಳವಡಿಸಿಕೊಳ್ಳುವ ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷೆ ರದ್ದತಿಗೆ ಕಾರಣವೇನು?
ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಯ ವಿವಿಧ ಹುದ್ದೆಗಳ ನೇಮಕಾತಿಗೆ ಇದೇ ಮೇ 9 ಮತ್ತು 10 ರಂದು ನಡೆಸಬೇಕಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಏಪ್ರಿಲ್ 4 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ. ಈ ಕಾರಣದಿಂದಾಗಿ ಈ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೆಲವು ಹುದ್ದೆಗಳ ಪರೀಕ್ಷೆಗಳು ಯಥಾವತ್ತು
ರದ್ದತಿಯ ಹೊರತಾಗಿಯೂ ಕೆಲವು ನಿರ್ದಿಷ್ಟ ಹುದ್ದೆಗಳಿಗೆ ಪರೀಕ್ಷೆಗಳು ನಿಗದಿತ ಸಮಯಕ್ಕೆ ನಡೆಯಲಿವೆ. ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು ಮತ್ತು ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗಳಿಗೆ ಈಗಾಗಲೇ ಏಪ್ರಿಲ್ 26 ಮತ್ತು 27 ರಂದು ಪತ್ರಿಕೆ-2 ರ ಪರೀಕ್ಷೆ ನಡೆಸಲಾಗಿದೆ. ಇಂತಹ ಅಭ್ಯರ್ಥಿಗಳಿಗೆ ಮೇ 9 ಮತ್ತು 10 ರಂದು ಸಾಮಾನ್ಯ ಜ್ಞಾನ ಪತ್ರಿಕೆಯ (ಪತ್ರಿಕೆ-1) ಪರೀಕ್ಷೆಯನ್ನು ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
#KeaRecruitment: ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಯ ವಿವಿಧ ಹುದ್ದೆಗಳ ನೇಮಕಾತಿಗೆ ಇದೇ 9 ಮತ್ತು 10ರಂದು ನಡೆಸಬೇಕಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.
ಪರೀಕ್ಷೆ ನಡೆಸದಿರುವ ಹುದ್ದೆಗಳಿಗೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ಅಧಿಸೂಚನೆ… pic.twitter.com/akfvJjBQ3E
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 5, 2026








