ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಫಲಾನುಭವಿಗಳು ಕಡ್ಡಾಯವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ನೋಂದಾಯಿಸುವಂತೆ ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ, ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ ಜಿಟಿಟಿಸಿ, ಸಿಡಾಕ್, ಸರ್ಕಾರಿ ಐಟಿಐಗಳಲ್ಲಿ ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಆದರೂ ಸಹ ನಿರೀಕ್ಷಿತ ಸಂಖ್ಯೆಯ ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ ಅಡಿಯಲ್ಲಿ ತರಬೇತಿಯನ್ನು ಪಡೆಯುತ್ತಿರುವುದಿಲ್ಲದರ ಕಾರಣ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು https://skillmission.karnataka.gov.in/app/registration_verify ಈ ಲಿಂಕ್ನ್ನು ಉಪಯೋಗಿಸಿ ತುರ್ತಾಗಾಗಿ ನೋಂದಾಯಿಸಿಕೊಂಡು ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿಯನ್ನು ಪಡೆದುಕೊಳ್ಳಬೇಕು ಮತ್ತು ಈ ಸುವರ್ಣಾಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ವಿಶೇಷ ಸೂಚನೆ: ಪ್ರಸ್ತುತ ಯುವನಿಧಿ ಫಲಾನುಭವಿಗಳು ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ತರಬೇತಿಯನ್ನು ಪಡೆದರೂ ಸರ್ಕಾರವು ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ಅಡಚಣೆಗಳು ಇರುವುದಿಲ್ಲ.
ಪೋರ್ಟಲ್ನಲ್ಲಿನ ಕೌಶಲ್ಯ ತರಬೇತಿ ನೋಂದಣಿ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೆ.ಜಿ.ಐ.ಡಿ ಕಚೇರಿ ಎದುರುಗಡೆ, ಜಿಲ್ಲಾಡಳಿತ ಭವನ ಕೊಪ್ಪಳ ರವರನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.









