ತಮಿಳುನಾಡು : ತಮಿಳುನಾಡಿನಲ್ಲಿ ಈ ಬಾರಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭಾರಿ ಇತಿಹಾಸ ನಿರ್ಮಾಣ ಮಾಡಿದ್ದು ಇದೀಗ ಇನ್ನೆರಡು ದಿನಗಳಲ್ಲಿ ವಿಜಯ್ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈಗಾಗಲೇ ಕಾಂಗ್ರೆಸ್ ನೊಂದಿಗೆ ವಿಜಯ್ ಮೈತ್ರಿ ಮಾಡಿಕೊಂಡಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳುವ ಸಾಧ್ಯತೆ ಇದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು ರಾಜ್ಯಪಾಲ ರಾಜೇಂದ್ರ ಅವರನ್ನು ಭೇಟಿಯಾಗಿ ವಿಜಯ ಅವರು ಹಕ್ಕು ಮಾಡಿಸಿದ್ದಾರೆ. ಒಟ್ಟು 234 ಕ್ಷೇತ್ರಗಳ ಪೈಕಿ ಪಕ್ಷ 108 ಕ್ಷೇತ್ರಗಳಲ್ಲಿ ಗೆದ್ದಿದ್ದು, ತಿರುಚಿನಳ್ಳಿ ಹಾಗು ಪೆರಂಬೂರು ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು ಸಾಧಿಸಿದ್ದಾರೆ. ಸರ್ಕಾರ ರಚಿಸಲು ಟೀವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿದ್ದು, ಸದ್ಯ ಮ್ಯಾಜಿಕ್ ನಂಬರ್ ದಾಟಲು ಕೇವಲ ಆರು ಶಾಸಕರ ಬೆಂಬಲದ ಅಗತ್ಯವಿದೆ. ಹಾಗಾಗಿ ಎರಡು ದಿನಗಳಲ್ಲಿ ಉಳಿದ ಆರು ಶಾಸಕರ ಬೆಂಬಲ ಪಡೆಯುವ ಸಾಧ್ಯತೆ ಇದೆ.







