ದುಬಾರೆ : ಜಗತ್ತಿನಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ದುಬಾರೆಯಲ್ಲಿಂದು ನೂತನ ತೂಗು ಸೇತುವೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರು ಶೃಂಗೇರಿ ಶಾಸಕ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ನುಡಿದಂತೆ ನಡೆಯಲಿಲ್ಲ ಎಂದರು.
ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ ಪಕ್ಷ ಅದನ್ನು ಈಡೇರಿಸಿತೇ, ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ ಬಿಜೆಪಿ ಅದನ್ನಾದರೂ ಈಡೇರಿಸಿತೆ. ಬರಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ವಂಚಿಸುತ್ತಿದೆ ಎಂದರು.
ಶೃಂಗೇರಿ ವಿಧಾನಸಭಾ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದ 3 ವರ್ಷ ಆಗಿದೆ. ಈಗ ಅಂಚೆ ಮತಗಳ ಎಣಿಕೆಯಲ್ಲಿ ಗೆದ್ದಿರುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದೆ. ಇದು ಮತ ಡಕಾಯಿತಿಯಲ್ಲದೆ ಬೇರೇನೂ ಅಲ್ಲ, ಈಗ ಹೊಸ ಸುಳ್ಳು ಹೇಳುತ್ತಾ ಜನರನ್ನು ನಂಬಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಇಡೀ ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ಯಾರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಈ ಚುನಾವಣೆಯ ವಿಚಾರದಲ್ಲೂ ಆಗ ಅಧಿಕಾರದಲ್ಲಿದ್ದ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದರು.
BREAKING: 75000 ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ
ಚಿತ್ರದುರ್ಗ: ಕರ್ತವ್ಯದ ವೇಳೆ ಮದ್ಯಪಾನ, ದುರ್ನಡತೆ ಆರೋಪ; ವಿವಿ ಪುರ PHC ವೈದ್ಯ ಡಾ.ಚಂದ್ರಮೌಳಿ ಸಸ್ಪೆಂಡ್







