ಧಾರವಾಡ : ಧಾರವಾಡದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ನೀರಿನ ಗುಂಡಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ. ಕುಮಾರ್ ಮುದುಕಣ್ಣನವರ್ (8) ಮತ್ತು ಪ್ರಥಮ್ (8) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಆಟವಾಡುತ್ತ ನೀರಿನ ಗುಂಡಿ ಬಳಿಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮನೆ ನಿರ್ಮಿಸಲು ತೆಗೆದಿದ್ದ ಗುಂಡಿಯಲ್ಲಿ ಇಬ್ಬರು ಬಾಲಕರು ಬಿದ್ದು ಸಾವನಪ್ಪಿದ್ದಾರೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.








